ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ
(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಆಚರಣೆ ಜಗತ್ತಿಗೆ ಗಾಂಧಿ ಸಂದೇಶ ಸಾರುವಂತಿರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಜೊತೆಗೆ ರಿಚರ್ಡ್ ಅಟೆನ್ಬರೋ ಅವರ ಗಾಂಧಿ ಸಿನಿಮಾ ಕೂಡ ಕನ್ನಡದಲ್ಲಿ ನಿರ್ಮಾಣವಾಗಲಿದೆ. ಸುವರ್ಣ […]
