ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ ಸೂಚನೆ
(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ವ್ಯಕ್ತಿಗಳು, ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು,ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ […]

