ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ
(ನ್ಯೂಸ್ ಕಡಬ) newskadaba.com, ನ.06 ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ.ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು. […]

