ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ನಟ ಮೋಹನ್ ಲಾಲ್
(ನ್ಯೂಸ್ ಕಡಬ) newskadaba.com, ಸೆ.24 ನವದೆಹಲಿ: ಮಂಗಳವಾರ ನಡೆದ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೋಹನ್ ಲಾಲ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಬಂದಾಗ ಸಭಾಂಗಣದಲ್ಲಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು. ಚಿತ್ರರಂಗದಲ್ಲಿ ಮೋಹನ್‌ಲಾಲ್ ಮಾಡಿದ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 65 […]

