ಮಂಗಳೂರು: ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಎಲ್‌ಪಿಜಿ ಪೂರೈಕೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
(ನ್ಯೂಸ್ ಕಡಬ) newskadaba.com, ಮಾ.02: ಸ್ಥಳೀಯ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ನಿರಂತರವಾಗಿ ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಪೂರೈಸುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳು ಮತ್ತು ತೈಲ ಕಂಪನಿಗಳಿಗೆ ಸೂಚಿಸಿದ್ದಾರೆ.. ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು, ತೈಲ ಕಂಪನಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಧನ ಕೊರತೆಯಿಂದಾಗಿ ಮೀನುಗಾರಿಕಾ ಉದ್ಯಮಕ್ಕೆ ಯಾವುದೇ ಅಡ್ಡಿಯಾಗಬಾರದು ಎಂದು ಹೇಳಿದರು. ಮೀನುಗಾರಿಕಾ ಬೋಟುಗಳಿಗೆ ಡೀಸೆಲ್ ಕೊರತೆಯಾಗದಂತೆ ಸರಬರಾಜು […]

