ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ
(ನ್ಯೂಸ್ ಕಡಬ) newskadaba.com, ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ […]

