ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ
(ನ್ಯೂಸ್ ಕಡಬ) newskadaba.com, ಮಾ.17 ಮಂಗಳೂರು/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮುಂದುವರಿದಿರುವ ನಡುವೆಯೂ ದೇಶದ ಅಡುಗೆ ಅನಿಲ ಪೂರೈಕೆಯ ಕುರಿತು ಉಂಟಾಗಿದ್ದ ಆತಂಕ ಕಡಿಮೆಯಾಗಿದೆ. ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಯಾವುದೇ ಅಡಚಣೆಯಿಲ್ಲದೆ ದಾಟಿ ಗುಜರಾತ್‌ನ ಮುಂದ್ರಾ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್)ಗಾಗಿ ತರಲಾಗುತ್ತಿರುವ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಅನಿಲವನ್ನು ಇಳಿಸಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ […]

