ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು
(ನ್ಯೂಸ್ ಕಡಬ) newskadaba.com, ನ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನ.19 ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು.ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು.ಕುಕ್ಕೆ ಸುಬ್ರಹ್ಮಣ್ಯದ ಹಲವೆಡೆ ಬೆಳಗುದ ಲಕ್ಷ ಹಣತೆ ದೀಪದ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವ ನೆರವೇರಿತು ಇದಕ್ಕೂ ಪೂರ್ವದಲ್ಲಿ ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಬಳಿಕ ಪ್ರಧಾನ ದೇವಾಲಯದಲ್ಲಿ […]

