ಕಡಬ: ಮಾತೃಪೂರ್ಣ ಯೋಜನೆಗೆ ಚಾಲನೆ ► ತಲೆಗೆ ಹೂ ಮುಡಿಸಿ, ಕೈಗೆ ಬಳೆತೊಡಿಸಿ, ಹಣೆಗೆ ಕುಂಕುಮ ಇಟ್ಟು ಗರ್ಭಿಣಿ- ಭಾಣಂತಿಯರಿಗೆ ಗೌರವ
(ನ್ಯೂಸ್ ಕಡಬ) newskadaba.com ಕಡಬ,ಅ.3. ಕರ್ನಾಟಕ ಸರ್ಕಾರವು ಜಾರಿಗೆ ತಂದ ಮಾತೃಪೂರ್ಣ ಯೋಜನೆಯ ಉದ್ಘಾಟನೆಯು ಸೋಮವಾರ ಕಡಬ ಚರ್ಚು ಅಂಗನವಾಡಿಯಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ. ವರ್ಗೀಸ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾತೃಪೂರ್ಣ ಯೋಜನೆಯು ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯದ ದೃಷ್ಟಿಯಿಂದ ರೂಪಿಸಿರುವ ಉತ್ತಮ ಯೋಜನೆಯಾಗಿದೆ ಈ ಯೋಜನೆ ನಮ್ಮ ದ.ಕ.ಹಾಗೂ ಉಡುಪಿ ಜಿಲ್ಲೆಗೆ ಔಚಿತ್ಯವಾಲ್ಲವಾದರೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ಸರಿಯಾಗಿ ದೊರಕುವುದಿಲ್ಲ ಇದನ್ನು ಗಮನದಲ್ಲಿಟ್ಟು ಸರ್ಕಾರ ಯೋಜನೆ ರೂಪಿಸಿದೆ. ಇಂತಹ […]

