ಮಾನವ ಸರಪಳಿ

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರದಂದು ಮಂಗಳೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ […]

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ Read More »

ಕರಾವಳಿ

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ Read More »

ಕರಾವಳಿ

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕದ ಉತ್ತರ ತುದಿಯಾದ ಬೀದರ್ ಜಿಲ್ಲೆಯಿಂದ ದಕ್ಷಿಣ ತುದಿಯಾದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿಯನ್ನು ರಚಿಸಿ ಸಂವಿಧಾನದ ಬಗ್ಗೆ ದೇಶದ ನಾಗರಿಕರಲ್ಲಿ ಅರಿವು ಮೂಡಿಸಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿಯನ್ನು ಮುಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದವರೆಗೆ ರಚಿಸುವ ಮೂಲಕ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ Read More »

ಕರ್ನಾಟಕ
Scroll to Top