ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ […]
