ಮೃತದೇಹದಿಂದ ಕೊರೋನ ಸೋಂಕು ಹರಡುದಿಲ್ಲ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಎ.24: ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರಿಬ್ಬರ ಶವಸಂಸ್ಕಾರಕ್ಕೆ ಸಾರ್ವಜನಿಕ ವಿರೋಧ ವ್ಯಕ್ತಪಡಿಸಿದ ವಿಚಾರವಾಗಿ, ದ.ಕ. ಜಿಲ್ಲಾಡಳಿತ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದು ಈ ಬಗ್ಗೆ ಪ್ರಕಟನೆ ಹೊರಡಿಸಿದೆ. ಜನಸಾಮಾನ್ಯರಲ್ಲಿ ಮಾಹಿತಿ ಕೊರತೆ ಹಾಗೂ ತಪ್ಪುಕಲ್ಪನೆಯಿಂದ ಶವ ಸಂಸ್ಕಾರಕ್ಕೆ ಕೆಲವೊಂದು ಕಡೆ ಅಡ್ಡಿಪಡಿಸುತ್ತಿದ್ದಾರೆ. ಆದರೆ ಕೊರೋನ ಸೋಂಕಿತರ ಮೃತದೇಹದಿಂದ ಸೋಂಕು ಹರಡಿರುವ ಬಗ್ಗೆ ಎಲ್ಲಿಯೂ ವರದಿಯಾಗಿಲ್ಲ. ಜನರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೆಲವೊಂದು ಮುನ್ನೆಚ್ಚರಿಕೆ ವಹಿಸಿ ಶವಸಂಸ್ಕಾರವನ್ನೂ ವೀಕ್ಷಿಸಿ ಕೆಲವು ಸಂಪ್ರದಾಯಗಳನ್ನು ನಡೆಸಬಹುದು […]

ಮೃತದೇಹದಿಂದ ಕೊರೋನ ಸೋಂಕು ಹರಡುದಿಲ್ಲ: ದ.ಕ. ಜಿಲ್ಲಾಧಿಕಾರಿ Read More »

ಕರಾವಳಿ