ಯೆಲ್ಲೋ ಅಲರ್ಟ್ ಘೋಷಣೆ​

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com , ಏ.01: ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್‌ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​

(ನ್ಯೂಸ್ ಕಡಬ) newskadaba.com ಅ. 22.  ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.    

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​ Read More »

ಕರ್ನಾಟಕ
Scroll to Top