ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು
(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್ ಎನ್. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.
ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »
ಕರಾವಳಿ, ಕ್ರೈಮ್ ನ್ಯೂಸ್