Breaking news ರಾಜ್ಯದಲ್ಲಿ ಗುರುವಾರ ಒಂದೇ ದಿನ 36 ಜನರಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ
ಬೆಂಗಳೂರು, ಎ.16: ರಾಜ್ಯದಲ್ಲಿ ಗುರುವಾರ ಮತ್ತೆ ಕೊರೋನ ಸೋಂಕಿನ ಸರಣಿ ಮುಂದುವರಿದಿದ್ದು, ಇಂದು 36 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 315ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಿಂದಾಗಿ ತಿಳಿದು ಬಂದಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 35 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದೆ. […]

