ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS)ಯಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳ ಕ್ಲೈಮ್‌ಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವುದಕ್ಕೆ ರಕ್ಷಣಾ ಸಚಿವಾಲಯವು ಶಾಶ್ವತ ವ್ಯವಸ್ಥೆ ರೂಪಿಸಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ‘ನಿಯಮ 377’ರಡಿ ಒತ್ತಾಯಿಸಿದ್ದಾರೆ. ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು, ಯೋಧನಾಗಿ […]

