ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
(ನ್ಯೂಸ್ ಕಡಬ) newskadaba.com, ಜು.10 ವಿಟ್ಲ: ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
