ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಕಳವು
(ನ್ಯೂಸ್ ಕಡಬ) newskadaba.com, ಫೆ.10 : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ […]

