ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ
(ನ್ಯೂಸ್ ಕಡಬ) newskadaba.com, ನ.26 :ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀ ಕೃಷ್ಣ ಮಠದ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನವೆಂಬರ್ 28ರಂದು ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ. ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ..ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೇಂದ್ರೀಯ ಸಚಿವರು, ಕರ್ನಾಟಕದ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು […]

