ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಅ.31. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.1ರಂದು ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 10.00ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ಉದ್ಘಾಟಿಸಲಿದ್ದು ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ ಧ್ವಜಾರೋಹಣಗೈಯಲಿದ್ದಾರೆ. […]

