ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ
(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ […]
