ಸಾವು

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ […]

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ8, ತೂಫಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ತೂಫಾನ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ.23, ಅಪರಿಚಿತ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಬೆನ್ದಾರದಲ್ಲಿ ನಡೆದಿದೆ. ಘಟನೆಯಲ್ಲಿ ಲೀಮುಗುಡ ಜಿಲ್ಲೆಯ ಮೊರೋಲೆ ಸಂತೋಷ್(18) ಹಾಗೂ ಅಡೇ ತಿರುಪತಿ(22). ಅಗರ್‍ವಾಡದಲ್ಲಿ ವಾಸಿಸುತ್ತಿದ್ದ ವೇದ್‍ಮ ಅಂಭರಾವ್(25), ಕೇರಮೇರಿ ಮಂಡಲ್‍ನ ಜಾರಿ ಜಿಲ್ಲೆಯ ಲೇಂದಗುಡ(14) ಸಾವನ್ನಪ್ಪಿರುವ ವ್ಯಕ್ತಿಗಳು ಎಂದು ವಾನ್‍ಕಿಡಿ ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು Read More »

ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ
Scroll to Top