ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ […]
