ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ
(ನ್ಯೂಸ್ ಕಡಬ) newskadaba.com, ಮೇ.18: ದೇವರಕೊಲ್ಲಿ ಬಳಿ 3 ಕಾರುಗಳ ನಡುವೆ ಸರಣಿ ಅಪಘಾತ ಉಂಟಾಗಿ ಕಾರುಗಳು ಜಖಂಗೊಂಡಿರುವ ಘಟನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದ ಕಾರಿಗೆ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಚಾಲಕ ಬ್ರೇಕ್ ಹಾಕಿದಾಗ ಅದರ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಈ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂರೂ ಕಾರುಗಳು ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
