ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

(ನ್ಯೂಸ್‌ ಕಡಬ) newskadaba.com ,ಆ.06 : ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎನ್ನಲಾಗಿದೆ

ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್