ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಜೂ. 09. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು, ಕಡಬ ಇದರ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜಂಟಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಪತ್ರಕರ್ತರಾದ ನಾಗರಾಜ್ ಎನ್ ಕೆ ಆಗಮಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವವನ್ನು ವಹಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಶಿಸ್ತಿನ ನಾಯಕರಾಗಿ […]

