ಹಿಂದಿಗೆ ಅಂಕ ಪ್ರಶ್ನಿಸಿ ಸರ್ಕಾರ ಹೈಕೋರ್ಟ್ಗೆ, ಏ.24ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಡೌಟ್
(ನ್ಯೂಸ್ ಕಡಬ) newskadaba.com, ಎ.20: ತೃತೀಯ ಭಾಷಾ ವಿಷಯಗಳಿಗೆ ಗ್ರೇಡಿಂಗ್ ಬದಲು ಅಂಕಗಳನ್ನೇ ನೀಡುವಂತೆ ಮಾಡಿರುವ ಆದೇಶ ಮರುಪರಿಶೀಲಿಸುವಂತೆ ಸರ್ಕಾರ ಮತ್ತೆ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ಪರೀಕ್ಷೆಗೂ ಮೊದಲೇ ಪ್ರಕಟಿಸಿದ್ದ ಏ.24ರ ಸಂಭಾವ್ಯ ದಿನಾಂಕದಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಕಡಿಮೆ. ಗ್ರೇಡಿಂಗ್ ಬದಲು ಅಂಕಗಳನ್ನೇ ನೀಡುವಂತೆ ಆದೇಶಿಸಿರುವ ಪೀಠದ ಮುಂದೆ ಏ.21ರಂದು ಮರುಪರಿಶೀಲನಾ ಅರ್ಜಿಯು ವಿಚಾರಣೆಗೆ ನಿಗದಿಯಾಗಿದೆ. ಹೈಕೋರ್ಟ್ ಯಾವ ಆದೇಶ ನೀಡಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಈ […]

