ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಮಾಸ್ಟರ್ ಪ್ಲಾನ್: ಪಿಯು ಉಪನ್ಯಾಸಕರಿಗೆ 9, 10ನೇ ತರಗತಿ ಬೋಧನೆ ಕಡ್ಡಾಯ
(ನ್ಯೂಸ್ ಕಡಬ) newskadaba.com,ಜೂ.20: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.’ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು-2013′ ಕ್ಕೆ ಸರ್ಕಾರ ಮಹತ್ವದ ತಿದ್ದುಪಡಿ ತಂದಿದ್ದು, ಇದರ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಕರಡು ನಿಯಮದ ಕುರಿತು ಸಾರ್ವಜನಿಕರು ಅಥವಾ ಸಂಬಂಧಪಟ್ಟವರಿಂದ ಆಕ್ಷೇಪಣೆ ಸಲ್ಲಿಸಲು 7 […]

