ಹೊಟೇಲ್, ಉಪಾಹಾರ, ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ 50ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. […]
ಹೊಟೇಲ್, ಉಪಾಹಾರ, ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ Read More »
ಕರ್ನಾಟಕ
