ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ 8 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com, ಸೆ.27 ಹೊಸಪೇಟೆ : ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5.15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ತೋರಣಗಲ್ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. […]
ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ 8 ಮಂದಿಗೆ ಗಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
