ಕೇಂದ್ರದಿಂದ ದ.ಕ ಜಿಲ್ಲೆಗೆ ‘ಪಿಎಂ ಜನ್ ಮನ್’ ಯೋಜನೆಯಡಿ ಬುಡಕಟ್ಟು ಸಮುದಾಯ ಅಭ್ಯುದಯಕ್ಕೆ 10.32 ಕೋಟಿ ರೂ. ಬಿಡುಗಡೆ ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ. ಚೌಟ ಅವರು, ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ […]
