ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, 22.78 ಕೋಟಿ ರೂ. ಪತ್ತೆ!
(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 22.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ. ಇದರಲ್ಲಿ 16.48 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 2.44 ಕೋಟಿ ರೂ. ಮೌಲ್ಯದ ಆಭರಣಗಳು ಸೇರಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, […]

