ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್
(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ […]

