ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com, ಆಗಸ್ಟ್ 28 ಮಂಗಳೂರು : ಕೆಎಸ್ಆರ್ಟಿಸಿ ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪುರುಷ ಮತ್ತು ಮೂವರು ಮಹಿಳೆಯರು ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು ಕೂಡ ಪ್ರಾಣ […]
