7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್
ಬೆಂಗಳೂರು, ಎ.2 ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ. ಆದ್ರೇ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎಪ್ರಿಲ್ 14ರ ಬಳಿಕ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಲೈವ್ ಮೂಲಕ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬಳಿಕ 7ರಿಂದ 9ನೇ ತರಗತಿಯ […]

