ACB

ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ತಾಯಿಯ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡುವುದಕ್ಕೆಂದು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರು ಸೋಮವಾರದಂದು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರೇಮ್ ಸಿಂಗ್ ನಾಯಕ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಐತ್ತೂರು ಗ್ರಾಮದ ಶಾಹುಲ್ ಹಮೀದ್ ಎಂಬವರು ತನ್ನ ತಾಯಿಯ ಹೆಸರಿನಿಂದ ತನ್ನ ಹೆಸರಿಗೆ 9&11 ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ […]

ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ Read More »

ಕರಾವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆಯ ಅಧ್ಯಕ್ಷ ಎಚ್.ಬಿ. ನಾಗೇಶ್ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ. ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿಶ್ವವಿದ್ಯಾಲಯದ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು Read More »

ಕರ್ನಾಟಕ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »

ಕರಾವಳಿ

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ Read More »

ಕರಾವಳಿ
Scroll to Top