accident news

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ […]

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಕನ್ನಡತಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿರುವ ಕನ್ನಡತಿ‌ ಹುಡುಗಿ ಸಾರಾ ಅಣ್ಣಯ್ಯ ಇದೀಗ ಬಿಕಿನಿ ವೇಷ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಗೋವಾ ಬೀಚ್ ನಲ್ಲಿ ಬಿಕಿನಿ ತೊಟ್ಟು ಫೊಟೊಗೆ ಪೋಸ್ ನೀಡುವ ಮೂಲಕ ಕಿರುತೆರೆಯಲ್ಲಿ ನಟಿಸುತ್ತಾ ಬಿಕಿನಿ ತೊಡುವ ಕೆಲವೇ ಕೆಲವು ನಟಿಯರ ಸಾಲಿಗೆ ಇದೀಗ ಸಾರಾ ಅಣ್ಣಯ್ಯ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಸ್ವಲ್ಪ ಮಟ್ಟಿಗೆ ಅರೆಬರೆ ಬಟ್ಟೆ ತೊಟ್ಟಿದ್ದ ಸಾರಾ ಅಣ್ಣಯ್ಯ ಇದೀಗ ಪೂರ್ಣ ಪ್ರಮಾಣದಲ್ಲಿ ಬಿಕಿನಿ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ Read More »

ಕರ್ನಾಟಕ, ಲೈಫ್‍ಸ್ಟೈಲ್

ಮೂರು ವಾಹನಗಳ ನಡುವೆ ಸರಣಿ ಅಪಘಾತ- ರಿಕ್ಷಾ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು. 08. ಮೂರು ವಾಹನಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಧರೆಗುಡ್ಡೆ ಎಂಬಲ್ಲಿ ನಡೆದಿದೆ. ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನವು ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ ಹಂಗೊಟ್ಟು ಎಂಬಲ್ಲಿ ಬೊಲೇರೋ ಕಾರು ಹಾಗೂ ರಿಕ್ಷಾವೊಂದಕ್ಕೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು ವಾಹನಗಳಲಿದ್ದ ಸವಾರರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ವಾಹನಗಳ ನಡುವೆ ಸರಣಿ ಅಪಘಾತ- ರಿಕ್ಷಾ ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ,

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top