Accident

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಎಕ್ಸ್‌ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 30 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಟೇಷನ್ ಮಾಸ್ಟರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಶೋ ನಲ್ಲಿ ವಿಮಾನಗಳ ನಡುವೆ ಢಿಕ್ಕಿ – ಪೈಲಟ್ ಗಳಿಬ್ಬರು ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್​, ಸೆ. 18. ಏರ್ ಶೋನಲ್ಲಿ ವಿಮಾನಗಳು ಪರಸ್ಪರ ಡಿಕ್ಕಿಯಾಗಿ ಪೈಲಟ್​ಗಳು ಮೃತಪಟ್ಟ ಘಟನೆ ಯುಎಸ್​​ನ ನೆವಡ ಪ್ರದೇಶದ ರೆನೊದಲ್ಲಿ ನಡೆದ ನ್ಯಾಷನಲ್​ ಚಾಂಪಿಯನ್​ಷಿಪ್​ ಏರ್​ ರೇಸಸ್ ಆಯಂಡ್​ ಏರ್​ ಶೋನಲ್ಲಿ ಸಂಭವಿಸಿದೆ. ಮೃತ ಪೈಲಟ್​ಗಳನ್ನು ಮ್ಯಾಸಿ ಹಾಗೂ ಕ್ರಿಶ್ ರಷಿಂಗ್ ಎಂದು ಗುರುತಿಸಲಾಗಿದೆ. ಭಾನುವಾರದಂದು ನಡೆದ ಟಿ-6 ಗೋಲ್ಡ್ ರೇಸ್​ನ ಅಂತಿಮ ಹಂತದಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಸುಮಾರು 2.15ರ ಹೊತ್ತಿಗೆ ಎರಡು ವಿಮಾನಗಳು ಪರಸ್ಪರ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಏರ್ ಶೋ ನಲ್ಲಿ ವಿಮಾನಗಳ ನಡುವೆ ಢಿಕ್ಕಿ – ಪೈಲಟ್ ಗಳಿಬ್ಬರು ದುರಂತ ಅಂತ್ಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ನಡೆದಿದೆ. ಸ್ವಿಫ್ಟ್ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಜಪೆ, ಸೆ. 18. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ(37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ’ನಲ್ಲಿ ಭೀಕರ ಅಪಘಾತ ಸಂಭವಿಸಿ ಮಾಜಿ ಸೈನಿಕ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್ ಪ್ರೆಸ್ ವೇಯಲ್ಲಿ ಭಾನುವಾರ ಮುಂಜಾವ ಸಂಭವಿಸಿದೆ. ಮೃತರನ್ನು ಆನೇಕಲ್ ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

(ನ್ಯೂಸ್ ಕಡಬ) newskadaba.com ಕುಣಿಗಲ್, ಸೆ. 16. ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಹೇರೂರು ಸೇತುವೆ ಬಳಿ ಶುಕ್ರವಾರದಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ನಾಗಮಂಗಲ ತಾಲೂಕು ಸೀಗೇಹಳ್ಳಿ ಗ್ರಾಮ ಹಾಲಿ ಬೆಂಗಳೂರು ಮಾದನಾಯಕಹಳ್ಳಿ ನಿವಾಸಿ ಶೋಭಾ ಮತ್ತು ಮಗ ನಿಖಿಲ್ ಗೌಡ(12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪತಿ ಗಂಗೇಶ್ ಹಾಗೂ ಮಗಳು ಭುವನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top