Accident

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ಅಪಘಾತಗಳನ್ನು ಹೊರತುಪಡಿಸಿ ಇತರ ಕಾರಣಗಳಿಂದ ಸಾವನ್ನಪ್ಪುವ ನೌಕರರ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರ ಹಣವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದ್ವಿಗುಣಗೊಳಿಸಿದೆ. ಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ನಿಗಮದ ಪರಿಷ್ಕೃತ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ 14 ಲಕ್ಷ ರೂ.ಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿಂದ 6 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. KSRTC ಈಗಾಗಲೇ […]

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.17:‌ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬೈರಾಪುರ ಕ್ರಾಸ್‌ ಬಳಿ ನಡೆದಿದೆ. ಮಂಡ್ಯ ಮೂಲದ ಶ್ವೇತಾ(38), ಕನಕಪುರ ಮೂಲದ ಬಾಲನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿದ್ದು,

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು Read More »

ಕರ್ನಾಟಕ

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 10. ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಭಾರತೀಯ ಮೂಲದ ಒಟ್ಟು ೬ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಅಮೆರಿಕ ರಜೆಗೆ ತೆರಳಿದ್ದ ಹೈದರಾಬಾದ್‌ನ ನಾಲ್ವರು ಸದಸ್ಯರ ಕುಟುಂಬವಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಡಲ್ಲಾಸ್‌ನಲ್ಲಿ ನಡೆದಿದೆ. ಅಟ್ಲಾಂಟಾದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಿ ಹೋಗಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ, ಮೃತಪಟ್ಟವರನ್ನು ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಂಬನ್, ಜು05. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಸ್‌ ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ Read More »

ಕರಾವಳಿ

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 05. ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಜೂ. 27. ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರು ಮತ್ತು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು

(ನ್ಯೂಸ್ ಕಡಬ) newskadaba.com, ಜೂ.06. ಕಂಟೇನರ್‌ ಹಾಗೂ ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ದಾಬಸಪೇಟೆಯ ಎಂ.ಇ ಸೋಲಾರ್ ಪ್ಲಾಂಟ್‌ನಲ್ಲಿ ಕೆಲಸ ಮುಗಿಸಿ ಬರುವಾಗ ತುಮಕೂರು (Tumkur) ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ದುರಂತ ನಡೆದಿದೆ. ರಾಜೇಶ್ (25), ಧನಂಜಯ್ (27), ಧನುಷ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದಗ ದೌಡಾಯಿಸಿದ್ದು ಪರಿಶೀಲಿಸಿದ್ದಾರೆ.

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು Read More »

ಕರ್ನಾಟಕ
Scroll to Top