Accident

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.24. ವಿಷ್ಣು ಸರ್ಕಲ್ ಬಳಿ ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಅತಿ ವೇಗದಿಂದ ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದ್ದು, ಚಾಲಕ ಗಾಬರಿಗೊಂಡು ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದೆ. ಘಟನೆಯಿಂದ ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭಿಸಿದೆ. ಸುಳ್ಯ ಪೊಲೀಸರು ಘಟನಾ […]

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರುಗಡೆಯಿಂದ ಬರುತ್ತಿದ್ದ ಮಾರುತಿ 800 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ಇವರೆಲ್ಲರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪುತ್ತೂರು

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಕಣ್ಣೂರು, ಮೇ.17. ಇನ್ನೋವಾ ಕಾರು- ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಮಂಗಳೂರು: ಸಿಟಿ ಬಸ್‌‌ಗಳ ನಡುವೆ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ನಗರದ ಹಂಪನಕಟ್ಟೆ ಸಿಗ್ನಲ್ ಬಳಿ ಮೂರು ಸಿಟಿ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಟೇಟ್ ಬ್ಯಾಂಕ್ ನಿಂದ ಕುಂಜತ್ತಬೈಲ್ ಕಡೆಗೆ ಹೋಗುತ್ತಿದ್ದ ಬಸ್, ತಲಪಾಡಿ‌ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ತಲಪಾಡಿಗೆ ಹೋಗುತ್ತಿದ್ದ ಬಸ್, ಅದರ ಮುಂಭಾಗದಲ್ಲಿದ್ದ ನೀರುಮಾರ್ಗದ‌ ಬಸ್ಸಿನ ಹಿಂಭಾಗಕ್ಕೆ ಬಡಿದಿದೆ. ಇನ್ನು ಘಟನೆಯಲ್ಲಿ ಮೂರು ಬಸ್ ಗಳು ಜಖಂಗೊಂಡಿದ್ದು, ಕುಂಜತ್ತಬೈಲ್‌ನ‌ ಬಸ್ ನ

ಮಂಗಳೂರು: ಸಿಟಿ ಬಸ್‌‌ಗಳ ನಡುವೆ ಸರಣಿ ಅಪಘಾತ Read More »

ಕರಾವಳಿ

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ 

(ನ್ಯೂಸ್ ಕಡಬ)Newskadaba.com ಸುರತ್ಕಲ್, ಮೇ.13. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದಿದೆ.  

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ  Read More »

ಕರಾವಳಿ

ಬೈಕ್​ ಗೆ KSRTC ಬಸ್ ಢಿಕ್ಕಿ ➤ ಸ್ಥಳದಲ್ಲೇ ನವವಿವಾಹಿತೆ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಮೇ.08. ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಬಳಿ ನಡೆದಿದೆ. ಹಲ್ಲರೆ ಗ್ರಾಮದ ಪೂಜಾ(19) ಮೃತ ದುರ್ದೈವಿಯಾಗಿದ್ದಾರೆ. ಪತಿ ಮದನ್ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಡಿಯಾಲ ಗ್ರಾಮದಿಂದ ಸಾರಿಗೆ ಬಸ್ ನಂಜನಗೂಡು ಕಡೆಗೆ ಬರುತ್ತಿದ್ದ ವೇಳೆ ಬೈಕ್ ​ನಲ್ಲಿ ನವದಂಪತಿಗಳು ತೆರಳುತ್ತಿದ್ದಾಗ ಈ ಸಂಭವಿಸಿದೆ.  

ಬೈಕ್​ ಗೆ KSRTC ಬಸ್ ಢಿಕ್ಕಿ ➤ ಸ್ಥಳದಲ್ಲೇ ನವವಿವಾಹಿತೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ, 08. ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top