Accident

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ […]

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ. ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ಗುಂಡ್ಯ, ಏ.14. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪ KSRTC ರಾಜಹಂಸ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ.

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ Read More »

ಕರಾವಳಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.14. ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ. ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್ Read More »

ಕರಾವಳಿ

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು

(ನ್ಯೂಸ್ ಕಡಬ)newskadaba.com ಅಂಕೋಲಾ, ಏ.13. ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಂಕೋಲಾದ ಶೋಭಾ ಗೋಪಾಲ(28) ಮೃತಪಟ್ಟವರಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.  

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.11. ಪಡುಬದ್ರಿ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ಗಾಯಗೊಂಡವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಪೂಜಾರಿ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದರು. ಉಡುಪಿಯಿಂದ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.11. ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ರಾತ್ರಿ ಬೈಕ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿದ್ದ ಸವಾರರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಇವರ ಗುರುತು ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.10. ಕಾರು ಅಪಘಾತದಲ್ಲಿ ಗಾಯಗೊಂಡು ಗಂಭೀರವಸ್ಥೆಯಲ್ಲಿದ್ದ ಉಡುಪಿ ಕಾಪು ನಿವಾಸಿ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಕೆಸಿಎಫ್ ಅಬುಹಾದ್ರಿಯ ಸೆಕ್ಟರ್, ಜುಬೈಲ್ ಇದರ ಈಸ್ಟ್ ಯುನಿಟ್ ನ ಪಬ್ಲಿಕೇಶನ್ ವಿಂಗ್ ನ ಕಾರ್ಯದರ್ಶಿ ಕೂಡ ಆಗಿದ್ದ ಎನ್ನಲಾಗಿದೆ.  

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಕಾರು ಭೀಕರ ಅಪಘಾತ ➤ ನಾಲ್ವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಉತ್ತರಕನ್ನಡ, ಏ.08. ಕಾರು ಮತ್ತು ಟ್ಯಾಂಕರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗ್ರಾಮದ ಹಾರೂಗಾರ ಬಳಿ ನಡೆದಿದೆ. ಅಪಘಾತದಲ್ಲಿ ಬಿಜೆಪಿ ಸದಸ್ಯ ನಿತಿನ್​ ರಾಯ್ಕರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಜೊತೆಗಿದ್ದ ವಿ.ಎಂ.ಹೆಗಡೆ, ಪ್ರದೀಪ ಗುನಗಿ, ಗಜಾನನ ರೇವಣಕರ ಹಾಗೂ ಸಂದೇಶ ಎಂಬವರೂ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದು, ಬಳಿಕ ಅಲ್ಲಿಂದ

ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಕಾರು ಭೀಕರ ಅಪಘಾತ ➤ ನಾಲ್ವರ ಸ್ಥಿತಿ ಗಂಭೀರ Read More »

ಕರ್ನಾಟಕ
Scroll to Top