Accident

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ನಗರದ ಬೆಂದೂರ್‌ವೆಲ್‌ ನಲ್ಲಿ ಖಾಸಗಿ ಬಸ್‌ ನಡಿಗೆ ಮಗುವೊಂದು ಬಿದ್ದು ಮೃತಪಟ್ಟು, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.25. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 24. ಅಶೋಕ್ ಲೈಲ್ಯಾಂಡ್ ದೋಸ್ತ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75ರ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಮಹಮ್ಮದ್ ಅನ್ಸಾರ್, ಸುಮಯ್ಯ ಹಾಗೂ 1 ವರ್ಷದ ಮಗು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ.  

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.  

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕರಾವಳಿ, ಕ್ರೈಮ್ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್
Scroll to Top