Accident

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಉಡುಪಿ-ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಷೇಕ್ ಆಚಾರ್ಯ, ಅಭಿಷೇಕ್ ಹಾಗೂ ಮತ್ತಿಬ್ಬರು ವಾಹನದಲ್ಲಿದ್ದರು ಎಂದು ವರದಿಯಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್‌ನಲ್ಲಿ ಎರಡು ಬೈಕುಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕಾಶ್ ಹಾಗೂ ಅಫ್ಜಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು Read More »

ಕರ್ನಾಟಕ

ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com , ಮೇ.26. ಸಂಡೂರಿನ ಜೈಸಿಂಗಪುರ ಬಳಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಲಕ್ಷ್ಮೀಪುರ ಗ್ರಾಮದ ಕುಟುಂಬದವರು ಹೊಸಪೇಟೆ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರು ಜೈಸಿಂಗಪುರದ ಬಳಿ ಮೈನಿಂಗ್ ಟಿಪ್ಪರ್‌ ಅನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಅದರಲ್ಲಿದ್ದ

ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರ್ನಾಟಕ

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com, ಮೇ.06: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com , ಏ.03: ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು ಎಂದು ತಿಳಿದು ಬಂದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ವಲಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ

ಕಾರಿನ ಮೇಲೆ ಬಿದ್ದ ಲಾರಿ – ಪವಾಡಸದೃಶವಾಗಿ ಇಬ್ಬರು ಪಾರು

(ನ್ಯೂಸ್ ಕಡಬ) newskadaba.com ಮಾ. 15 : ನೆಲಮಂಗಲದ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಟ್ರಕ್‌ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ಘಟನೆ ಸಂಭವಿಸಿದ ರೀತಿಯಲ್ಲೇ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಬಾಗೋಜಿಕೊಪ್ಪದ ನಿವಾಸಿಗಳಾದ ಪರಪ್ಪ ಮತ್ತು ನಾಗಪ್ಪ ಎಂಬುವವರು ಇಂದು ಬೆಳಗ್ಗೆ ತಮ್ಮ ವ್ಯಾಗನರ್‌ ಕಾರನ್ನು ಸರ್ವಿಸ್ ಮಾಡಿಸಬೇಕು ಎಂದು ಬೆಳಗಾವಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮೇಲೆ ಬಿದ್ದಿದೆ. ಲಾರಿ

ಕಾರಿನ ಮೇಲೆ ಬಿದ್ದ ಲಾರಿ – ಪವಾಡಸದೃಶವಾಗಿ ಇಬ್ಬರು ಪಾರು Read More »

ಕರ್ನಾಟಕ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 11 ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ

ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 03 ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ

ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು Read More »

ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾ. 01 ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ

ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ
Scroll to Top