Accident

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ತಿಂಥಣಿ ಬಳಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ,ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.ಮೃತಪಟ್ಟವರನ್ನು ಒಂದೇ ಕುಟುಂಬದ  ಹನುಮಂತ(1),  ಆಂಜನೇಯ(35), ಗಂಗಮ್ಮ (28),ಪವಿತ್ರ(5),ರಾಯಪ್ಪ(3) ಎಂದು ಗುರುತಿಸಲಾಗಿದೆ.

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು Read More »

ಕರ್ನಾಟಕ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು

(ನ್ಯೂಸ್ ಕಡಬ) newskadaba.com ಜ.11 ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಸ್ಕೂಟರ್ ಅಪಘಾತ ಸಂಭವಿಸಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದ ಗೂಡ್ಸ್ ಘಟನೆ ಉಡುಪಿ ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ತಡರಾತ್ರಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಗೆ ಬೆಂಕಿಗಾಹುತಿಯಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಅಡಿ ಭಾಗಕ್ಕೆ ಆ್ಯಕ್ಟಿವಾ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು Read More »

ಕರಾವಳಿ

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು

(ನ್ಯೂಸ್ ಕಡಬ) newskadaba.com ಜ.09 ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು Read More »

ಕರ್ನಾಟಕ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 28: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ್, ರಮೇಶ್ ನಾಯ್ಕ್ ಮೃತರು ಎಂದು ತಿಳಿದು ಬಂದಿದೆ. ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನು ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು Read More »

ಕರಾವಳಿ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ

(ನ್ಯೂಸ್ ಕಡಬ) newskadaba.com ಡಿ. 23  ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ Read More »

ಕರಾವಳಿ

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ

(ನ್ಯೂಸ್ ಕಡಬ) newskadaba.com ಡಿ. 24  ಹಾಸನ:  ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಾಘತದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಹಾಸನ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ನಡೆದ ಅಪಘಾತದಲ್ಲಿ ಚನ್ನರಾಯಪಟ್ಟಣ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದ ಅಭಿಷೇಕ್ (೩೨) ಹಾಗೂ ತುರುವೇಕೆರೆ ನಿವಾಸಿ ಮಂಜುನಾಥ್ (೨೮) ಇವರು ಸಾವನಪ್ಪಿದ ದುರ್ದೈವಿಗಳು.

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ Read More »

ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com  ಡಿ. 11. ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನು ಮರಕುಂಬಿ ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top