Accident

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು          

(ನ್ಯೂಸ್ ಕಡಬ) newskadaba.com  ಭಟ್ಕಳ, ಡಿ. 15. ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಮೂಡ್ ಭಟ್ಕಳ ಬೈಪಾಸ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಮಂಜುನಾಥ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿಗೆ ಹೋಗುತ್ತಿದ್ದ ವೇಳೆ […]

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು          

(ನ್ಯೂಸ್ ಕಡಬ) newskadaba.com  ಮುಂಬೈ, ಡಿ. 15.  ಬಸ್ಸೊಂದು ವೃದ್ಧನಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೂವೈ ಎಂಬಲ್ಲಿ ಸಂಭವಿಸಿದ್ದು, ಯಾವುದೇ ಅಪಾಯವಾಗಿಲ್ಲ ಎಂದೆನ್ನಲಾಗಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದು, ಬಸ್ ಅವರ ಮೇಲೆ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.    

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ , ಡಿ 15 : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಮೃತಪಟ್ಟವರನ್ನು ಜಕ್ಕಹಳ್ಳಿ ಗ್ರಾಮದ ಚಂದ್ರು(32) ,ಲಕ್ಕೂರು ಗ್ರಾಮದ ಅನಿಲ್ (26) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಮೈಸೂರಿನ  ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಢಿಕ್ಕಿ

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 15. ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಬಾಗಕ್ಕೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು, ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಕಬಕ- ವಿಟ್ಲ ರಸ್ತೆಯಲ್ಲಿ ನಡೆದಿದೆ. ಕಬಕ ವಿಟ್ಲ ರಸ್ತೆಯ ಮಧ್ಯೆ ಲಾರಿಯೊಂದನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಸ್ಕೂಟರ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ

ಪಾದಚಾರಿಗೆ ಟಿಪ್ಪರ್ ಢಿಕ್ಕಿ ➤ ಆಲಂಕಾರು ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರ್ಡೂರು, ಡಿ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದರೋರ್ವರಿಗೆ ಟಿಪ್ಪರ್ ಢಿಕ್ಕಿ ಹೊಡೆದು, ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತರನ್ನು ಆಲಂಕಾರು ನಿವಾಸಿ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪೆರ್ಡೂರಿನಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಂಜಯ್ಯ ಶೆಟ್ಟಿ ಅವರ ತಲೆಯ ಮೇಲೆ ಟಿಪ್ಪರ್ ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ

ಪಾದಚಾರಿಗೆ ಟಿಪ್ಪರ್ ಢಿಕ್ಕಿ ➤ ಆಲಂಕಾರು ನಿವಾಸಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು             

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 14. ಕ್ಯಾಂಟರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತರನ್ನು ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ(25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.          

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಲಂಡನ್, ಡಿ. 14. ಕಾರು ಅಪಘಾತಕ್ಕೊಳಗಾಗಿ ಇಂಗ್ಲೆಂಡ್‌ ಕ್ರಿಕೆಟ್ ತಂಡದ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಅವರು ಗಾಯಗೊಂಡ ಘಟನೆ ವರದಿಯಾಗಿದೆ. ಬಿಬಿಸಿಯ “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಆಂಡ್ರ್ಯೂ ಕುಳಿತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂಡಲೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡವು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಿಬಿಸಿ ತಿಳಿಸಿರುವುದಾಗಿ ವರದಿಯಾಗಿದೆ. 124 ಎಂಪಿಎಚ್ ವೇಗದಲ್ಲಿ

ಕಾರು ಅಪಘಾತ ➤ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಸ್ಪತ್ರೆಗೆ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

 (ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಡಿ.14 ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಬಳಿ ಗಾಂಧಿಪಾರ್ಕ್ ಎಂಬಲ್ಲಿ ಸಂಭವಿಸಿದೆ. ಪರಿಣಾಮವಾಗಿ ಟ್ರಾಕ್ಟರ್ ಹಿಂಬದಿಯ ಟ್ರಾಲಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.   ನೆಲ್ಯಾಡಿ ಕಡೆಯಿಂದ ಬಿ,ಸಿ ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಗಾಂಧಿಪಾರ್ಕ್ ಬಳಿ ಓವರ್ ಟೇಕ್ ಮಾಡಿದ್ದು, ಆಗ ಟ್ರಾಕ್ಟರ್ ಗೆ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ. 13. ಇನ್ನೋವಾ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇನ್ನೋವಾ ಕಾರಿನಲ್ಲಿದ್ದ ಕೃಷ್ಣಮೂರ್ತಿ(66), ಜಯಂತಿ(60) ಹಾಗೂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಸಿಫ್ಟ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ವಾಹನ ದಟ್ಟಣೆ ಹೆಚ್ಚಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 13. ಹಳ್ಳಬಿದ್ದ ರಸ್ತೆಗಳಲ್ಲಿ ಸಂಚರಿಸುವಾಗ ಗೂಡ್ಸ್ ಲಾರಿ ಪಲ್ಟಿಯಾದ ಘಟನೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.   ಕಾಟನ್ ತುಂಬಿದ್ದ ಲಾರಿಯು ಮಾಲೂರಿನಿಂದ ಬೆಂಗಳೂರಿಗೆ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top