Accident

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾಪು, ಜ. 12. ಅಡಿಕೆ ಸಾಗಾಟದ ಟೆಂಪೋ ವಾಹನವೊಂದು ರಾ.ಹೆ 66ರ ಫ್ಲೈ ಓವರ್ ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಟೆಂಪೋದ ಟಯರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೋ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 07. ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಇಲ್ಲಿನ ಜ್ಯೋತಿ ವೃತ್ತದ ಬಳಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ ಡಿಕ್ಕಿ

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜ. 05. ನದಿ ತೀರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ರಾ.ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಪ್ರಯಾಣಿಕರಿಬ್ಬರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆಯೇ ಅಶ್ರಫ್ ಮತ್ತು

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 04. ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಇಂದು ಸಂಜೆ ಬಂದ್ಯೋಡು- ಪೆರ್ಮುದೆ ರಸ್ತೆಯ ಮೀಪಿರಿ ಎಂಬಲ್ಲಿ ನಡೆದಿದೆ.   ಮೃತಪಟ್ಟ ಮಗುವನ್ನು ಕಯ್ಯಾರ್ ಪಿಲಿಯಂದೂರಿನ ರಿಜ್ವಾನ್ ಎಂದು ಗುರುತಿಸಲಾಗಿದೆ. ತಾಯಿ ಹಾಗೂ ಮಗು ಬಂದ್ಯೋಡು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದ ಟಯರ್ ಕಳಚಿದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು ಗಂಭೀರ ಗಾಯಗೊಂಡ ಮಗು ಮೃತಪಟ್ಟಿದೆ. ತಾಯಿ ಫಾಯಿಸಾ ಮತ್ತು

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿಪ್ಪರ್‌ ಡಿಕ್ಕಿಯಾಗಿ RSS‌‌ ಹಿರಿಯ ಕಾರ್ಯಕರ್ತನ ಮೃತ್ಯು ಪ್ರಕರಣ ➤ ಪರಾರಿಯಾಗಿದ್ದ ಟಿಪ್ಪರ್‌ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಡಿ.15ರ ಮಂಗಳವಾರ ಮುಂಜಾನೆ ಮಾಣಿ-ಮೈಸೂರು ರಸ್ತೆಯ ಕಬಕ ಸಮೀಪದ ಪೋಳ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಹಿರಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ವೆಂಕಟರಮಣ ಹೊಳ್ಳ ಅವರ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಟಿಪ್ಪರ್‌ ಚಾಲಕನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮರಳು ಲೋಡ್‌‌‌ಗಾಗಿ ಚರಣ್‌ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಪೋಳ್ಯ ಸಮೀಪ ಟಿಪ್ಪರ್‌-ಬೈಕ್‌‌ ಮಧ್ಯೆ ಅಪಘಾತ ಸಂಭವಿಸಿತ್ತು. ಘಟನೆ ನಡೆದ ನಂತರ ಚಾಲಕ ಟಿಪ್ಪರ್‌ನೊಂದಿಗೆ ಪರಾರಿಯಾಗಿದ್ದ. ಪ್ರಾರಂಭದಲ್ಲಿ

ಟಿಪ್ಪರ್‌ ಡಿಕ್ಕಿಯಾಗಿ RSS‌‌ ಹಿರಿಯ ಕಾರ್ಯಕರ್ತನ ಮೃತ್ಯು ಪ್ರಕರಣ ➤ ಪರಾರಿಯಾಗಿದ್ದ ಟಿಪ್ಪರ್‌ ಚಾಲಕನ ಬಂಧನ Read More »

ಕರಾವಳಿ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ
Scroll to Top