Amit shah

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.03: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಈ ಮೂವರು ನಾಯಕರ ಚಿತ್ರಗಳು ಮತ್ತು ಅಶ್ಲೀಲ ಹಾಡನ್ನು ಹೊಂದಿರುವ ಪೋಸ್ಟ್‌ ನವೆಂಬರ್‌ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆ ಪ್ರದೇಶದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ,

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 28. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್ 1, 2024 ರಿಂದ ಜಯ್ ಶಾ ICCಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top