ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..?
(ನ್ಯೂಸ್ ಕಡಬ) newskadaba.com ತಮಿಳುನಾಡು, ಆ. 28. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂಗ್ಲೆಂಡ್ ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಈ ಕೋರ್ಸ್‌ಗಾಗಿ ಲಂಡನ್‌ಗೆ ತೆರಳುತ್ತಿರುವ […]
