ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!
(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು […]


