atm theft

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಇಲ್ಲಿನ ಸೌತ್ ಇಂಡಿಯನ್ ಬ್ಯಾಂಕ್ ಬ್ರ್ಯಾಂಚ್‌ ಪಕ್ಕದಲ್ಲಿರುವ ಎಟಿಎಂ ಕೇಂದ್ರದಲ್ಲಿ ಹಣ ಲೂಟಿಗೆ ಯತ್ನಿಸಿ ವಿಫಲವಾದ ಘಟನೆ ಶುಕ್ರವಾರದಂದು ನಡೆದಿದೆ. ಕಳ್ಳರು ಎಟಿಎಂ ಕೇಂದ್ರಕ್ಕೆ ಜೆಸಿಬಿ ನುಗ್ಗಿಸಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ, ಸೈರನ್ ಆಗಿದ್ದನ್ನು ಕಂಡು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಎಟಿಎಂ ಒಳನುಗ್ಗಿದ ಕಳ್ಳರು ಎಟಿಎಂ ಯಂತ್ರವನ್ನೇ ಕಂಟೇನರ್ ನಲ್ಲಿ ಹೊತ್ತೊಯ್ದ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿ. 10ರಂದು ಹರಳೂರು ರಸ್ತೆಯ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದು, ಮರುದಿನ ಬೆಳಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top